Breaking News

ಚಾಮರಾಜನಗರದಲ್ಲಿ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಸರ್ಕಾರಿ ಬಸ್ ಗೆ ಬೈಕಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೂರ್ಣಕೆರೆ ಬಳಿ ತಾಳಬೆಟ್ಟದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.ಮೃತರನ್ನು ರಾಮೇಗೌಡನಹಳ್ಳಿಯ ಶಿವಪ್ಪ ಮತ್ತು ಸತೀಶ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *