Breaking News

ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಹನೂರು: ಕೆ.ಎಸ್‌.ಆರ್‌.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿರುವ ಮೂಕಳ್ಳಿ ಮಾರಮ್ಮ ದೇವಾಲಯದ ಬಳಿ ಜ.13ರ ಮಂಗಳವಾರ ನಡೆದಿದೆ.ತಾಲೂಕಿನ ಪೊನ್ನಾಚಿ ಸಮೀಪದ ರಾಮೇಗೌಡನಹಳ್ಳಿಯ ಶಿವಪ್ಪ (21), ಸತೀಶ (24) ಮೃತ ಬೈಕ್‌ ಸವಾರರು.ಬೈಕ್‌ ಗೆ ಕೆ.ಎಸ್‌.ಆರ್‌.ಟಿ.ಸಿ. ಬಸ್ ಡಿಕ್ಕಿ ಹೊಡೆದು ಅಪಘಾತವಾಗುತ್ತಿದ್ದಂತೆ ಸ್ಥಳದಿಂದ ಬಸ್ ಚಾಲಕ, ನಿರ್ವಾಹಕ ನಾಪತ್ತೆಯಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಮಪುರ ಪೊಲೀಸರು ಪರಿಶೀಲನೆ ನಡೆಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *