Breaking News

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ₹1.26 ಲಕ್ಷ ಮೌಲ್ಯದ ಗೋವಾ ಮದ್ಯ ವಶ

ಜೀಪ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.26ಲಕ್ಷ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಚೆಂಚೆವಾಡಾದ ಐಸ್ ಫ್ಯಾಕ್ಟರಿ ಸಮೀಪ ಸೋಮವಾರ ರಾತ್ರಿ ಚಿತ್ತಾಕುಲ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗೋವಾದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ವಿವಿಧ ಬ್ರ್ಯಾಂಡುಗಳ ಮದ್ಯ ದಾಸ್ತಾನನ್ನು ವಶಕ್ಕೆ ಪಡೆಯಲಾಗಿದೆ.ಸಾಗಾಟ ಮಾಡುತ್ತಿದ್ದ ಹುಬ್ಬಳ್ಳಿಯ ನೆಹರು ನಗರದ ನಾರಾಯಣ ಗಜಾನನ ದಲಬಂಜನ್ (30) ಎಂಬಾತನನ್ನು ಬಂಧಿಸಲಾಗಿದೆ. ಆತ ಸಾಗಾಟಕ್ಕೆ ಬಳಸಿದ್ದ ವಾಹನ ಮತ್ತು ಮದ್ಯ ದಾಸ್ತಾನನ್ನು ವಶಕ್ಕೆ ಪಡೆದಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *