Breaking News

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಎಸ್ಕೇಪ್! ಆರೋಪಿ ಅರೆಸ್ಟ್

ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಸರಗಳ್ಳನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯಶವಂತ್ (26) ಎಂದು ಗುರುತಿಸಲಾಗಿದ್ದು, ಡಿಸೆಂಬರ್ 24 ರಂದು ಈ ಘಟನೆ ಸಂಭವಿಸಿತ್ತು.ಧನಲಕ್ಷೀ ಎಂಬ ಮಹಿಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ಹೊಂಚು ಹಾಕಿ ಕುಳಿತಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ವೇಳೆ ಸರಗಳ್ಳನ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದೇ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಯಶವಂತ್‌ನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಶವಂತ್ ಈ ಹಿಂದೆ ಮೈಸೂರಿನ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಚೈನ್ ಸ್ನಾಚಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *