Breaking News

ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಆತ್ಮಹತ್ಯೆ

ಧಾರವಾಡ: ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕೇಂದ್ರ ಕಾರಾಗೃಹದಲ್ಲಿದ್ದ ಈಶ್ವರಪ್ಪ ಪೂಜಾರ (46) ಮಂಗಳವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೈದಿ ಈಶ್ವರಪ್ಪ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪೂರ ಗ್ರಾಮದವರು.2024 ಜೂನ್‌ 19ರಿಂದ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನ ಕೈಮಗ್ಗ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಕೆಲದಿನಗಳಿಂದ ಆತ ಹತಾಶನಾಗಿದ್ದ ಎಂದು ಸಹಕೈದಿಗಳು ತಿಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *