ಕೋಲಾರದಲ್ಲಿ ಪ್ರೀತಿ ನಿರಾಕರಣೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಮೃತ ಮಹಿಳೆಯನ್ನು ಸುಜಾತ (27) ಎಂದು ಗುರುತಿಸಲಾಗಿದ್ದು, ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಸುಜಾತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ತೆರಳುತ್ತಿದ್ದಳು ಎಂದು ತಿಳಿದುಬಂದಿದೆ.ಆರೋಪಿ ಚಿರಂಜೀವಿ, ಹೊಸಪೇಟೆಯ ಇಂಡಸ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದನು. ಸಾಲ ವಸೂಲಿಗೆ ತೆರಳಿದ ವೇಳೆ ಸುಜಾತಳ ಪರಿಚಯವಾಗಿದ್ದು, ನಂತರ ಆಕೆಯನ್ನು ಪ್ರೀತಿಸುವಂತೆ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ.
ಆದರೆ ಸುಜಾತ ಪ್ರೀತಿಯನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಆರೋಪಿ ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆ ಮಾಡಿದ್ದಾನೆ.ಗಮನಾರ್ಹ ಅಂಶವೆಂದರೆ, ಆರೋಪಿ ಚಿರಂಜೀವಿಗೂ ಮದುವೆಯಾಗಿದ್ದು, ಮಕ್ಕಳಿರುವುದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಈ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

