Breaking News

ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಈ ದುರಂತ ಸಂಭವಿಸ್ದೆ. ಬೈಕ್ ಸವಾರ ಫಾಸರ್ (75) ಮೃತ ದುರ್ದೈವಿ. ಬಸ್ ಡಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಬಸ್ ನ ಚಕ್ರ ಹರಿದು ಹೋಗಿದೆಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳುರಿನಿಂದ ಕೃಷ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಹಲಸೂರು ಗೇಟ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *