Breaking News

ಕಲಬುರಗಿಯಲ್ಲಿ ಚಲಿಸುತ್ತಿದ್ದ ‘KKRTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ.!

ಚಲಿಸುತ್ತಿದ್ದ ಕೆಕೆಆರ್ ಟಿಸಿ (KKRTC) ‘ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಬಳಿ ಈ ಘಟನೆ ನಡೆದಿದೆ.ಚಲಿಸುತ್ತಿದ್ದ ಕೆಕೆಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಬಂದಿದೆ.ಕೂಡಲೇ ಅಲರ್ಟ್ ಆದ ಚಾಲಕ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ಗೆ ಬೆಂಕಿ ತಗುಲಿರುವ ಶಂಕೆಯಾಗಿದೆ. ತಕ್ಷಣ ಸ್ಥಳೀಯರು ಬಸ್ ಗೆ ತಗುಲಿದ್ದ ಬೆಂಕಿ ನಂದಿಸಿದ್ದಾರೆ. ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಸ್ ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿತ್ತು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *