ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಮನೆಗೆ ಬೆಂಕಿಹೊತ್ತಿಕೊಂಡಿದ್ದು, ಕಲ್ನಾರ್ ಸೀಟಿನ ಮನೆಯೊಂದು ಸುಟ್ಟು ಹೋಗಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಗ್ರಾಮದ ಬಲಮುರಿ ರಸ್ತೆಯಲ್ಲಿರುವ ರವಿ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದೆ.ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವುದು ಖಾತರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಚಾವಣಿ ಸಂಪೂರ್ಣ ಹಾನಿಗೀಡಾಗಿದೆ. ಬಟ್ಟೆ, ಟಿವಿ, ಧವಸ- ಧಾನ್ಯ, ಪಾತ್ರೆಗಳು ನಾಶವಾಗಿವೆ. ಶ್ರೀರಂಗಪಟ್ಟಣ ಮತ್ತು ಮೈಸೂರಿನ ಹೆಬ್ಬಾಳದಿಂದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ನಷ್ಟದ ಅಂದಾಜು ಸಿಕ್ಕಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಕೆಆರ್ಎಸ್ ಠಾಣೆ ಪಿಎಸ್ಐ ರಮೇಶ್ ಕರಕಿಕಟ್ಟಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

