ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ, ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶಾಕಿಂಗ್ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತೀವ್ರ ಸುಟ್ಟ ಗಾಯಗಳಿಂದಾಗಿ ತಾಯಿ ಮೃತಪಟ್ಟಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಘಟನೆ ನಗರದ ಕೃಷ್ಣಪ್ಪ ಲೇಔಟ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಬೆಂಕಿ ಹಚ್ಚಿಕೊಂಡ ಹಿನ್ನೆಲೆ ತಾಯಿ ಸೀತಾ (29) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಪುತ್ರಿ ಸೃಷ್ಟಿಗೆ (4) ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಮಗಳು ಸೃಷ್ಟಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗಳು ಕೂಡಾ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

