Breaking News

ಕಾಳಿ ನದಿಯಲ್ಲಿ ಮುಳುಗಿ ಯುವಕ ಸಾವು

ದಾಂಡೇಲಿ(ಉತ್ತರ ಕನ್ನಡ ಜಿಲ್ಲೆ): ಮೌಳಂಗಿ ಸಮೀಪದ ಕಾಳಿ ನದಿಯ ಸಂಗಮ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಗೆಳೆಯರೊಂದಿಗೆ ಸ್ನಾನಕ್ಕೆ ತೆರಳಿದ್ದ ನವಾಝ್ ನಾಯ್ಕ (18) ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆಸ್ನಾನ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ನೀರಿನ ಹರಿವು ತೀವ್ರಗೊಂಡು ನವಾಜ್ ನೀರಿನಲ್ಲಿ ಕಾಣೆಯಾದರು.ತಕ್ಷಣವೇ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಫ್ಲೈಕ್ಯಾಚರ್ ರಾಫ್ಟಿಂಗ್ ತಂಡದವರು ಮತ್ತು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಿದರು. ನವಾಜ್ ಅವರ ಶವ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ದುಃಖ ಮುಗಿಲು ಮುಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *