Breaking News

ಹಳೇ ಹುಬ್ಬಳ್ಳಿ ಠಾಣೆ ಪಕ್ಕದಲ್ಲೇ ಗೂಂಡಾಗಿರಿ: ಪ್ರೀತಿಸಿದ ತಪ್ಪಿಗೆ ಯುವಕನ ಅಪಹರಣ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ನಿಲ್ಲುವ ಲಕ್ಷಣವೇ ಕಾಣಿಸುತ್ತಿಲ್ಲ.
ದಿನೇ ದಿನೇ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಸಾರ್ವಜನಿಕರ ಭದ್ರತೆ ಪ್ರಶ್ನಾರ್ಥಕವಾಗುತ್ತಿದೆ.ಹಾಡಹಗಲೇ ಯುವಕನ ಮೇಲೆ ಗೂಂಡಾಗಿರಿ ನಡೆಸಿ, ಆಟೋದಲ್ಲಿ ಅಪಹರಣ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಣತಿ ದೂರದಲ್ಲೇ ನಡೆದಿದೆ.
ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಸಹೋದರರು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಬಲವಂತವಾಗಿ ಆಟೋದಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಘೋಡಕೆ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದ್ದು, ಯುವಕನನ್ನ ಅಪಹರಣ ಮಾಡಿಕೊಂಡು ಹೋಗುವ ದೃಶ್ಯ ಸ್ಥಳೀಯರ ಮೊಬೈಲ್‌ಗಳಲ್ಲಿ ಸೆರೆಯಾಗಿದೆ.
ಯುವತಿಯ ಸಹೋದರರು ಹಾಗೂ ಅವರ ಸಹಚರರು ಸೇರಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ತಮ್ಮ ಮಗಳನ್ನ ಪ್ರೀತಿಸಿದ ತಪ್ಪಿಗೆ ಯುವಕನಿಗೆ ಜೀವ ಬೆದರಿಕೆ ಹಾಕಿ, “ತಂಗಿಯನ್ನು ಪ್ರೀತಿಸಬಾರದು” ಎಂದು ಧಮ್ಕಿ ಹಾಕಿ ಹಲ್ಲೆ ನಡೆಸಲಾಗಿದೆ ಎಂದು ಹಲ್ಲೆಗೊಳಗಾದ ಯುವಕ ಆರೋಪಿಸಿದ್ದಾನೆ.
ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕ ದೂರು ದಾಖಲಿಸಿದ್ದರೂ, ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ.ಹಾಡಹಗಲೇ ಅಪಹರಣ ನಡೆದರೂ ಪೊಲೀಸರು ಕಣ್ಮುಚ್ಚಿ ಕುಳಿತಿದಾರೆಯೇ?
ಅಪಹರಣ ಮಾಡಿದವರ ಬೆನ್ನಿಗೆ ಹಳೇ ಹುಬ್ಬಳ್ಳಿ ಪೊಲೀಸರ ಆಶ್ರಯವಿದೆಯೇ? ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಮೂಡಿವೆ.ಒಟ್ಟಾರೆ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಇಲಾಖೆ ವಿಫಲವಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಕೇಳಿಬರುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *