ಹುಬ್ಬಳ್ಳಿಯಲ್ಲಿ ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಸಬಾಪೇಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ತಂಡವು ಅರೆಸ್ಟ್ ಮಾಡಿ, ಬರೋಬ್ಬರಿ 15 ಕೆ. ಜಿ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಮುಂಬೈ ಮೂಲದ ಪರೀಜ್ ಜಹೀರ್ ಖಾನ್ ಹಾಗೂ ಸಲ್ಮಾನ್ ರೈಜಾಖಾನ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ದಿನದಂದು ಹಾವೇರಿ ಜಿಲ್ಲೆಯ ಹಾನಗಲ್ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಬ್ಬರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಒಟ್ಟು 15 ಕೆಜಿ 483 ಗ್ರಾಂ ಗಾಂಜಾ, ಮೂರು ಮೊಬೈಲ್ ಫೋನ್ ಹಾಗೂ ಒಂದು ಕಾರು ವಶಪಡಿಸಿಕೊಳ್ಳಲಾಗಿದೆ….
bigtvnews | Hubli Dharwad News | Kannada News | Karnataka News Hubli News | News In Hubli | Local news

