Breaking News

ಟ್ರಾಫಿಕ್ ಸಿಗ್ನಲ್ ನಲ್ಲಿ ಗಲಾಟೆ; ನಡುರಸ್ತೆಯಲ್ಲೇ ಡ್ರ್ಯಾಗರ್ ಹಿಡಿದು ಬೆದರಿಸಿದ ಯುವಕ!

ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಬಳಿ ಕಾರು ಚಾಲಕನೊಂದಿಗೆ ಗಲಾಟೆ ನಡೆಸಿ, ಕೈಯಲ್ಲಿ ಚಾಕು ಹಿಡಿದು ಬೆದರಿಕೆ ಹಾಕಿದ ಘಟನೆ ವೈಟ್‌ಫೀಲ್ಡ್ ವಿಭಾಗದಲ್ಲಿ ನಡೆದಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, KA53 JB 3274 ನೋಂದಣಿ ಸಂಖ್ಯೆಯ ಬೈಕ್ ಸವಾರ ದುರ್ವರ್ತನೆ ತೋರಿದ್ದಾನೆ ಎಂದು ಆರೋಪಿಸಲಾಗಿದೆ. ಅರ್ಬಾಜ್ ಖಾನ್ ಎಂಬ ಹೆಸರಲ್ಲಿ ನೋಂದಣಿಯಾಗಿರುವ ಬೈಕ್ ಚಲಾಯಿಸುತ್ತಿದ್ದ ಯುವಕ, ಸಿಗ್ನಲ್ ಬಳಿ ಕಾರು ಚಾಲಕನೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಗಲಾಟೆ ತೀವ್ರವಾಗುತ್ತಿದ್ದಂತೆ ಬೈಕ್‌ನಿಂದ ಇಳಿದ ಆತ, ಸೊಂಟದಲ್ಲಿ ಇಟ್ಟುಕೊಂಡಿದ್ದ ಡ್ರ್ಯಾಗರ್ ಹಾಗೂ ಕೈಯಲ್ಲಿ ಚಾಕು ಹಿಡಿದು ಕಾರು ಚಾಲಕನ ಮೇಲೆ ಆವಾಜ್ ಹಾಕಿ ಅವಾಚ್ಯವಾಗಿ ನಿಂದಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಪೂರ್ಣ ಘಟನೆ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *