Breaking News

ಯಾದಗಿರಿ: ಕಾರಿನಲ್ಲಿದ್ದ ₹14.50 ಲಕ್ಷ ನಗದು, 35 ಗ್ರಾಂ ಚಿನ್ನಾಭರಣ ಕಳವು

ಯಾದಗಿರಿ: ನಗರದ ರೈಲ್ವೆ ಸ್ಟೇಷನ್ ರಸ್ತೆ ‌ಬದಿ ನಿಲ್ಲಿಸಿದ್ದ ಕಾರಿನಲ್ಲಿ ಇರಿಸಿದ್ದ ₹ 14.50 ಲಕ್ಷ ನಗದು ಹಾಗೂ 35 ಗ್ರಾಂ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ.ಬಳಿಚಕ್ರ ಗ್ರಾಮದ ಶರಣಪ್ಪ ಕೊನೆಮನಿ ಎಂಬುವವರು ನಗದು ಮತ್ತು ಚಿನ್ನಾಭರಣ ಕಳೆದುಕೊಂಡವರು.ದೂರು ಆಧರಿಸಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಸವಿರುವ ಶರಣಪ್ಪ ಅವರು ವ್ಯವಹಾರ ಸಂಬಂಧಿಸಿದ ಕಾರ್ಯಕ್ಕಾಗಿ ₹ 5 ನಗದ ಹಣದೊಂದಿಗೆ ಕುಟುಂಬ ಸಮೇತ ಬಂದಿದ್ದರು. ಬ್ಯಾಂಕ್‌ನಿಂದ ₹9.50 ಲಕ್ಷ ಡ್ರಾ ಮಾಡಿಕೊಂಡು ಬಂದು ಕಾರಿನಲ್ಲಿ ಇರಿಸಿದ್ದರು. ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಬಟ್ಟೆ ಖರೀದಿ, ಜ್ಯೂಸ್ ಕುಡಿಯಲು ತೆರಳಿದ್ದರು. ಅದೇ ವೇಳೆ ಕಾರಿನಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ₹ 14.50 ಲಕ್ಷ ನಗದು ಕಳವು ಮಾಡಿಕೊಂಡು‌ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *