ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು, ಮಣ್ಣು, ಜಲ್ಲಿ ಮತ್ತು ಮರಳು ಸಾಗಿಸುವ ವಾಹನ ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.ಜ. 14ರಂದು ಮಧ್ಯಾಹ್ನ 2ರಿಂದ ಸಂಜೆ 7 ಗಂಟೆವರೆಗೆ ನಡೆದ ಕಾರ್ಯಾಚರಣೆಯಲ್ಲಿ 832 ವಾಹನ ಗಳನ್ನು ಪರಿಶೀಲಿಸಿ, 182 ಕ್ಕೆ ನೋಟಿಸ್ ನೀಡಲಾಗಿದೆ. ಓವರ್‌ಲೋಡ್ ಹಾಗೂ ಇತರ ಅಪರಾಧಗಳಿಗೆ 66 ವಾಹನಗಳಿಂದ 22,500 ರೂ. ದಂಡ ವಸೂಲಿ ಮಾಡಲಾಗಿದೆ. ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ಒಂದು ವಾಹನದ ಮೇಲೆ ಪ್ರಕರಣ ದಾಖಲಿಸಿದ್ದು 27 ವಾಹನಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

