Breaking News

ರಸ್ತೆ ಅಪಘಾತ; ಮಾಜಿ ಸಚಿವ ರಾಜೂ ಗೌಡ ಪಾರು

ಯಾದಗಿರಿ: ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ವಿಶಾಖಪಟ್ಟಣ ದಿಂದ ಸೆಲೆಬ್ರಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ ಹಿಂತಿರುವಾಗ ಅಪಘಾತ ಸಂಭವಿಸಿದೆ.ಟ್ರಕ್ಕೊಂದು ರಾಜು ಗೌಡರ ಕಾರಿಗೆ ಹಿಂದಿನಿಂದ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ರಾಜೂ ಗೌಡ ಅವರಿಗೆ ಸ್ವಲ್ಪ ತರಚಿದ ಗಾಯಗಳಾಗಿವೆ. ಪ್ರಥಮ ಚಿಕಿತ್ಸೆ ಪಡೆದು ವಾಪಸ್ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಖುದ್ದು ರಾಜೂಗೌಡ ಅವರೇ ಹಂಚಿಕೊಂಡ ವಿಡಿಯೋದಲ್ಲಿ ತಿಳಿದುಬಂದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *