ಬೆಂಗಳೂರು: ಮೇಲು ಸೇತುವೆ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದುಕೊಂಡ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಯಾಲಿಕಾವಲ್ ನಿವಾಸಿ ಹರ್ಷ (31) ಮೃತ ಸವಾರ. ವೃತ್ತಿಯಲ್ಲಿ ಕಾರು ಚಾಲಕರಾಗಿರುವ ಹರ್ಷ, ಕೆಲಸದ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಗೆ ಹೋಗಿದ್ದು, ಕೆಲಸ ಮುಗಿಸಿಕೊಂಡು ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಕೊಡಿಗೇಹಳ್ಳಿ ಮೇಲು ಸೇತುವೆ ಮೇಲೆ ಹೋಗುತ್ತಿದ್ದರು.ಈ ವೇಳೆ ಕೆಟ್ಟು ನಿಂತಿದ್ದ ಲಾರಿ ಗಮನಕ್ಕೆ ಬಾರದೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

