ದಾವಣಗೆರೆಯಲ್ಲಿ ಮಾದಕ ವಸ್ತು, ಸಿಂಥೆಟಿಕ್ಸ್ ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು ಮತ್ತೋರ್ವ ಉದ್ಯಮಿಯನ್ನು ಬಂಧಿಸಿದ್ದಾರೆ. ಶಿವರಾಜ್ ಬಂಧಿತ ಉದ್ಯಮಿ. ದಾವಣಗೆರೆಅ ವಿದ್ಯಾನಗರ ಠಾಣೆ ಪೊಲೀಸರು ಉದ್ಯಮಿ ಶಿವರಾಜ್ ನನ್ನು ಬಂಧಿಸಿದ್ದಾರೆ. ಉದ್ಯಮಿ ಶಿವರಾಜ್ ದಾವಣಗೆರೆಯ ಎಸ್.ಎಸ್. ಲೇಔಟ್ ನಿವಾಸಿ. ಈ ಹಿಂದೆ ಆರ್ ಟಿ ಒ ಕಚೇರಿಯಲ್ಲಿ ಏಜೆಂಟ್ ಆಗಿದ್ದರು. ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದರು. ಈಗಾಗಲೇ ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ವೀರಶೈವ ಮಹಾಸಭಾ ಸದಸ್ಯ ಶಾಮನೂರು ವೇದಮೂರ್ತಿ ಎಂಬಾತನ್ನನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ರಾಜಕೀಯ ಮುಖಂಡರು, ಉದ್ಯಮಿಗಳೇ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ತನಿಖೆ ಮುಂದುವರೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

