Breaking News

ಗಾಳಿಪಟ ಹಾರಿಸುವಾಗ ದುರಂತ: ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವಕ ದುರ್ಮರಣ

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ.ವಾಂಜರಿ ಬಡಾವಣೆಯಲ್ಲಿ ಈ ದುರಂತ ಸಂಭವಿಸಿದೆ. ಶಶಿಕುಮಾರ್ ಶಿವಾನಂದ್ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.ಗಾಳಿಪಟ ಹಾರಿಸುತ್ತಿದ್ದಾಗ ಏಕಾಏಕಿ ದಾರ ತುಂಡಾಗಿದೆ. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ ಆಯತಪ್ಪಿ ಯುವಕ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *