ಉಡುಪಿ: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ। ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಅನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ 1ನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂಬ ವ್ಯಕ್ತಿ ಜ.12 ರಂದು ರಾತ್ರಿ 8 ಬಳಿಕ ನಾಪತ್ತೆಯಾಗಿದ್ದಾರೆ.ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯ ದೂ: 0820-2520444, ಕಂಟ್ರೋಲ್ ರೂಂ: 0820-2526444 ಸಂಪರ್ಕಿಸಲು ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

