ಇಂದೋರ್: ರಸ್ತೆ ಬದಿಯಲ್ಲಿ ಊಟ ಮಾಡುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾರು ಹರಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಸಿಗ್ಮಾ ಕಾಲೋನಿ ಎಂಬಲ್ಲಿ ರಸ್ತೆ ವಿಭಜಕದ ರೇಲಿಂಗ್‌ಗಳನ್ನು ಅಳವಡಿಸುವ ಕೆಲಸದಲ್ಲಿ 13 ಮಂದಿ ಕಾರ್ಮಿಕರು ತೊಡಗಿದ್ದರು.ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಕಾರ್ಮಿಕರ ಮೇಲೆ ಹರಿದಿದೆ. ತಲೆಮರೆಸಿಕೊಂಡಿರುವ ಕಾರು ಚಾಲಕನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪಘಾತಕ್ಕೀಡಾದ ಕಾರಿಗೆ ನಂಬರ್ ಪ್ಲೇಟ್ ಇರಲಿಲ್ಲ. ಕಾರ್ಮಿಕರೆಲ್ಲರೂ ಮಂಡ್ಲಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

