Breaking News

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ತಲೆದಂಡ….

ರಾಜ್ಯದಲ್ಲಿ ಇಡೀ ಪೊಲೀಸ್ ಇಲಾಖೆಯ ತಲಿತಗ್ಗಿಸುವಂತಹ ಘಟನೆ ನಡೆದಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ, ರಾಜ್ಯ ಸರ್ಕಾರ ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿದೆ.ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಬಂದ ಬಳಿಕ ಆರೋಪ ಸಾಬೀತಾದರೆ ಅವರನ್ನು ವಜಾ ಮಾಡಲಾಗುತ್ತೆ ಎಂದು ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು…ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಡಿಜಿಪಿ ರಾಮಚಂದ್ರರಾವ್, ಇದು ಎಐ ಸೃಷ್ಟಿ ಮತ್ತು ತಮ್ಮ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟೀಕರಣ ನೀಡಿದ್ದರು. ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *