Breaking News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.73 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.73 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಮಲೇಷ್ಯಾದ ಕೌಲಲಾಂಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 1.73 ಕೋಟಿ ರೂ. ಮೌಲ್ಯದ 4.96 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿಳಿದ ಆತ ವಿಮಾನ ನಿಲ್ದಾಣದಿಂದ ಹೊರ ಹೋಗುವಾಗ ಅನುಮಾನದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಡೆದು ಬ್ಯಾಗ್ ಪರಿಶೀಲಿಸಿದ್ದಾರೆ. ಬ್ಯಾಗ್ ನಲ್ಲಿ 4.96 ಕೆಜಿ ಗಾಂಜಾ ಪತ್ತೆಯಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಆತನನ್ನು ಬಂಧಿಸಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *