ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನಾಲ್ಕರ್ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಹಾನಗಲ್ ಕಡೆಯಿಂದ ಹೊಂಕಣ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಹೊಂಕಣ ಗ್ರಾಮದ ನಟರಾಜ್ ದಳವಾಯಿ (43) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಅಡೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

