Breaking News

ಹಿರಿಯ ದಂಪತಿ ಅನುಮಾನಾಸ್ಪದ ಸಾವು

ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ನಿವಾಸಿ ಚಂದ್ರಪ್ಪ(68), ಜಯಮ್ಮ(65) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಮೃತದೇಹದ ಮೇಲೆ ಯಾವುದೇ ಗಾಯ, ಹಲ್ಲೆಯಾದ ಗುರುತುಗಳಿಲ್ಲ.ಶ್ವಾನದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಳೆನಗರ ಠಾಣೆಯಲ್ಲಿ ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಾವಿನ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *