Breaking News

ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ರಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ. ಕಚೇರಿ ಆವರಣದಲ್ಲಿ ಆರ್ ಡಿ ಎಕ್ಸ್ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ.ರಾಯಭಾರಿ ಕಚೇರಿಯ ಅಧಿಕಾರಿಗಳು ಇ ಮೇಲ್ ಪರಿಶೀಲನೆ ನಡೆಸುವಾಗ ಬಾಂಬ್ ಬೆದರಿಕೆ ಸಂದೇಶ ನೋಡಿದ್ದಾರೆ. ಕೂಡಲೇ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಸಮೇತ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಕುರಿತು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *