ಉಡುಪಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತಾನು ವಾಸವಾಗಿದ್ದ ಬೀಡಾರದ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೀಡಿನಗುಡ್ಡೆಯಲ್ಲಿ ನಡೆದಿದೆ. ಬರ್ಮವ್ವ (15) ಮೃತರು. ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು ವಾಸವಾಗಿದ್ದರು. ಮನೆ ಮಂದಿ ಬೆಳಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಗರ ಪೋಲಿಸ್ ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

