Breaking News

ಟಿಬಿ ಡ್ಯಾಂ ಬಳಿ ವಿಷ ಸೇವಿಸಿ ಬೆಂಗಳೂರಿನ ಮಹಿಳೆ ಆತ್ಮಹತ್ಯೆ

ಕೊಪ್ಪಳ: ತಾಲೂಕಿನ ಕಾಸನಕಂಡಿ ಗ್ರಾಮದ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಬೆಂಗಳೂರಿನ ಮಾಚೋಹಳ್ಳಿ ನಿವಾಸಿ ರೂಪಾ. ಎನ್‌. (37) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ರೂಪಾ ಕಳೆದ 4 ವರ್ಷಗಳಿಂದ ಕುಟುಂಬದಿಂದ ದೂರವಾಗಿ ವಾಸವಿದ್ದು, ಮಕ್ಕಳು ಹಾಗೂ ಪತಿಯನ್ನು ಸರಿಯಾಗಿ ನೋಡಿಕೊಳ್ಳಲಾಗಲಿಲ್ಲ ಎಂಬ ಮಾನಸಿಕ ವೇದನೆಯಿಂದ ಬಳಲುತ್ತಿದ್ದರು.ಜ.18ರಂದು ಕಾಸನಕಂಡಿ ಸೀಮಾದ ಜೋಪಡಿಯಲ್ಲಿ ಹೇನಿನ ಪುಡಿ ಸೇವಿಸಿದ್ದರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *