Breaking News

ಯಾದಗಿರಿಯಲ್ಲಿ ಘೋರ ಘಟನೆ : ಶಾಲೆಯಲ್ಲೇ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ.!

ಯಾದಗಿರಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು,ಶಾಲಾ ಆವರಣದಲ್ಲೇ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ವಡಗೇರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಪವನ್ (15) ಎಂದು ಗುರುತಿಸಲಾಗಿದೆ.ಶಾಲೆಯ ಸಮಯದಲ್ಲೇ ಶಾಲಾ ಹಿಂಭಾಗದಲ್ಲಿ ಪವನ್ ಸೂಸೈಡ್ ಮಾಡಿಕೊಂಡಿದ್ದಾನೆ. ಪವನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ದುಡುಕಿ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *