Breaking News

ಗಣರಾಜ್ಯೋತ್ಸವಕ್ಕೆ ಉಗ್ರ ದಾಳಿ ನಡೆಸಲು ಪಾಕ್, ಜೈಶ್‌ ಯೋಜನೆ?

ನವದೆಹಲಿ: ಗಣರಾಜ್ಯೋತ್ಸವ ಅಥವಾ ಅದಕ್ಕಿಂತ ಮೊದಲು ಭಾರತದಲ್ಲಿ ಉಗ್ರ ದಾಳಿಗಳನ್ನು ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಹಾಗೂ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ಯೋಜನೆ ರೂಪಿಸಿವೆ ಎಂದು ಗುಪ್ತಚರ ಮೂಲಗಳನ್ನುಲ್ಲೇಖಿಸಿ ಎನ್‌ಡಿಟೀವಿ ವರದಿ ಮಾಡಿದೆ. ಅಲ್ಲದೇ ಈ ದಾಳಿಗೆ ’26 26′ ಎಂಬ ಕೋಡ್‌ನೇಮ್‌ ಇಡಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿ, ಅಯೋಧ್ಯೆ, ಜಮ್ಮುಕಾಶ್ಮೀರ ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸುವ ಸಂಭವವಿದೆ. ಅಯೋಧ್ಯೆ ರಾಮಮಂದಿರ, ಜಮ್ಮು ಕಾಶ್ಮೀರದ ರಘುನಾಥ ಮಂದಿರ ಸೇರಿದಂತೆ ಪ್ರಮುಖ ದೇವಾಲಯಗಳು ಉಗ್ರರ ಪಟ್ಟಿಯಲ್ಲಿವೆ ಎಂದು ವರದಿ ತಿಳಿಸಿದೆ. ಗ್ಯಾಂಗ್‌ಸ್ಟರ್‌ಗಳ ಬೆಂಬಲ: ಪಾಕಿಸ್ತಾನದ ಐಎಸ್‌ಐ ಹಾಗೂ ಜೈಶ್‌ ಎ ಮೊಹಮ್ಮದ್‌ ಸಂಘಟನೆಗಳು ಈ ದಾಳಿಯನ್ನು ಯೋಜಿಸಿದ್ದು, ಇದಕ್ಕೆ ಪಂಜಾಬ್‌ನ ಗ್ಯಾಂಗ್‌ಸ್ಟರ್‌ಗಳು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪ್ರಮುಖ ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು, ಮಾರುಕಟ್ಟೆಗಳಲ್ಲಿ ಬಿಗಿ ಭದ್ರತೆ ವಹಿಸಲು ಸೂಚಿಸಲಾಗಿದೆ. ಅಲ್ಲದೇ ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಶಂಕಿತ ಉಗ್ರರ ಬಗ್ಗೆ ಪೋಸ್ಟರ್‌ಗಳನ್ನು ಅಂಟಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *