Breaking News

ಸುಳ್ಯ | ಬಾಲಕಿಯ ಮಾನಭಂಗಕ್ಕೆ ಯತ್ನ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಸೆಲ್ವಕುಮಾರ್‌ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ. ಸೆಲ್ವಕುಮಾರ್ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಮತ್ತೆ ಆರು ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕು ಎಂದು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ.ಅವರು ಆದೇಶದಲ್ಲಿ ತಿಳಿಸಿದ್ದಾರೆ. ಸೆಲ್ವ ಕುಮಾರ್ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆಗ ತನಿಖಾಧಿಕಾರಿಯಾಗಿದ್ದ ಆಂಜನೇಯ ರೆಡ್ಡಿ ಅವರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಪುಷ್ಪರಾಜ್ ವಾದ ಮಂಡಿಸಿದ್ದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *