Breaking News

ಟೀ ಅಂಗಡಿಯೊಂದರ ಮುಂದೆ ವಾಗ್ವಾದ | ಚಾಕು ಇರಿತ : ಇಬ್ಬರ ಬಂಧನ

ಗುಂಡ್ಲುಪೇಟೆ: ಪಟ್ಟಣದ ಟೀ ಅಂಗಡಿಯೊಂದರ ಮುಂದೆ ಮಂಗಳವಾರ ರಾತ್ರಿ ಗುಂಪೊಂದು ಪಟ್ಟಣದ ಮಹದೇವಪ್ರಸಾದ್ ನಗರದ ನಿವಾಸಿ ಸಾಬಿರ್ ಪಾಷ(22) ಎಂಬವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದೆ.ಪ್ರಕರಣಕ್ಕೆ ಸಂಬಂಧಿಸಿ ಧನು ಮತ್ತು ಈಶ್ವರ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ. ಘಟನೆ ವಿವರ: ಟೀ ಕುಡಿಯುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಆರು ಜನರ ಗುಂಪು ಸಾಬಿರ್ ಪಾಷ ಮುಖ ಹಾಗೂ ಬೆನ್ನಿಗೆ ಇರಿದು ಪರಾರಿಯಾಗಿತ್ತು. ಗಾಯಾಳು ಸಾಬಿರ್ ಪಾಷನನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಡಿವೈಎಸ್ಪಿ ಸ್ನೇಹರಾಜ್, ಇನ್‌ಸ್ಪೆಕ್ಟರ್ ಜಯಕುಮಾರ್ ಭೇಟಿ ನೀಡಿ, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ. ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *