Breaking News

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬುಧವಾರ ತುಯಿಬೊಂಗ್ ಪ್ರದೇಶದಲ್ಲಿರುವ ಮನೆಯಿಂದ ರಿಷಿಕಾಂತ ಸಿಂಗ್ ಎಂಬ ವ್ಯಕ್ತಿಯನ್ನು ಮನೆಯಿಂದ ಅಪಹರಿಸಿದ ಬಂಡುಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದ ಇಲ್ಲಿನ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಹಾಗೂ ಪ್ರತಿಭಟನೆಗಳು ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ. ಹತ್ಯೆ ಮಾಡಿದವರನ್ನು ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಸಂಘಟನೆಗೆ ಸೇರಿದವರು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಸಮುದಾಯಗಳ ನಡುವಿನ ಶಾಂತಿ ಮಾತುಕತೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವಾಗಲೇ ಈ ಘಟನೆ ನಡೆದಿದೆ. 2023ರಲ್ಲಿ ಆರಂಭವಾದ ಮಣಿಪುರ ಹಿಂಸಾಚಾರದಲ್ಲಿ ಇಲ್ಲಿಯವರೆಗೂ 260ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನ ಮನೆ-ಮಠ ಕಳೆದುಕೊಂಡಿದ್ದಾರೆ.

Share News

About BigTv News

Check Also

ಕೆರೆಯಲ್ಲಿ ಶವವಾಗಿ ಪತ್ತೆಯಾದ ಹೆಡ್ ಕಾನ್ಸ್ ಟೇಬಲ್

ಹೆಡ್ ಕಾನ್ಸ್ ಟೆಬಲ್ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದ ನಡೆದಿದೆ.ಲಕ್ಷ್ಮಣ (51 ಮೃತ ಹೆಡ್ ಕಾನ್ಸ್ ಟೇಬಲ್. …

Leave a Reply

Your email address will not be published. Required fields are marked *