ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಕಾಂಪ್ಲೆಕ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ. ಅಗ್ನಿ ಅವಘಡದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

