Breaking News

ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು

ಜಾರ್ಖಂಡ ರೈಲ್ವೆ ಕ್ರಾಸಿಂಗ್​ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನವದಿಹ್ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದೆ. ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ಟ್ರಕ್ ಈ ಕಡೆಯಿಂದ ಹಳಿ ದಾಟಿದಾಗ ಗೇಟ್ ತೆರೆದಿತ್ತು ಅತ್ತ ಹೋಗುವಷ್ಟರಲ್ಲಿ ಮುಚ್ಚಿತ್ತು ಹೀಗಾಗಿ ಅರ್ಧದಾರಿಯಲ್ಲಿ ನಿಂತ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿತ್ತು. ರೈಲು ಡಿಕ್ಕಿ ಹೊಡೆದು ತಳ್ಳಿದ ಪರಿಣಾಮ ಟ್ರಕ್​ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಜಸಿದಿಹ್-ಅಸನ್ಸೋಲ್ ಮುಖ್ಯ ಮಾರ್ಗದಲ್ಲಿ ರೈಲು ಸಂಚಾರ ಸುಮಾರು ಎರಡು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *