Breaking News

ಬೆಂಗಳೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ

ಎರಡನೇ ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆಕ್ರೋಶಕೊಂಡ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಮುರುಗೇಶ್​​ ಎಂದು ಗುರುತಿಸಲಾಗಿದೆ.ಕೊಲೆ ಪ್ರಕರಣ ಸಂಬಂಧ ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣುಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಮದುವೆಯಾಗಿತ್ತು. ಆದರೆ ಎರಡನೇ ಮಗಳು ಪ್ರೀತಿಸಿದ ಯುವಕನ ಜೊತೆ ಪರಾರಿಯಾಗಿದ್ದಳು. ಈ ವಿಚಾರ ದಂಪತಿ ನಡುವೆ ಜಗಳಕ್ಕೆ ಕಾರಣವಾಗುತ್ತಿತ್ತು. ಪತಿಯ ಕಿರುಕುಳದಿಂದ ತೀವ್ರವಾಗಿ ನೊಂದಿದ್ದ ಲಕ್ಷ್ಮೀ ಚಾಕುವಿನಿಂದ ಮುರುಗೇಶ್​​ ಎದೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಮುರುಗೇಶ್ ಮೃತಪಟ್ಟಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *