Breaking News

ಕಂದಾಯ ಕಟ್ಟಲು ಹೋದ ವ್ಯಕ್ತಿಯ ಮೇಲೆ ಕೈ ಮುಖಂಡನ ಸೋದರನಿಂದ ಭೀಕರ ಹಲ್ಲೆ.!

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಶಿಡ್ಲಘಟ್ಟದ ದರ್ಪದ ಘಟನೆ ಬೆನ್ನಲ್ಲೇ ಮತ್ತೊಂದು ದಬ್ಬಾಳಿಕೆ ಪ್ರಕರಣ ಬೆಳಕಿಗೆ ಬಂದಿದ್ದು, ಕಂದಾಯ ತೆರಿಗೆ ಕಟ್ಟಲು ಪುರಸಭೆ ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಹಾಗೂ ಅವರ ಸಹೋದರರು ಜನರ ಎದುರಲ್ಲೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಿಜಯಪುರ ಪಟ್ಟಣದ ಸಾಧತ್ ಪಾಷ ಎಂಬವರು ಕಂದಾಯ ಕಟ್ಟುವ ಸಲುವಾಗಿ ಪುರಸಭೆ ಕಚೇರಿ ಆವರಣಕ್ಕೆ ಆಗಮಿಸಿದ್ದ ವೇಳೆ, ಪುರಸಭೆಯ ಕಾಂಗ್ರೆಸ್ ಸದಸ್ಯ ಹನೀಫುಲ್ಲಾ ಹಾಗೂ ಅವರ ಸಹೋದರರು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡನಿಂದ ನಡೆದ ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್‌ಗಳಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಹನೀಫುಲ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *