Breaking News

ಅಳ್ನಾವರ | ಕಾಡು ಹಂದಿ ಮಾಂಸ ಸಾಗಣೆ; ಆರೋಪಿ ಬಂಧನ

ಪಟ್ಟಣಕ್ಕೆ ಹೊಂದಿಕೊಂಡಿರುವ ರಾಜ್ಯ ಹೆದ್ದಾರಿಯ ಡೌಗಿ ಹಳ್ಳ ಸೇತುವೆಯ ಬಳಿ ಕಾಡು ಹಂದಿಯನ್ನು ಬೇಟೆಯಾಡಿ, ಮಾಂಸವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ. ಇಲ್ಲಿನ ಸಂಜು ಈಶಂತ ರೊಡ್ರಿಗ್ಸ್ ಬಂಧಿತ ಆರೋಪಿ. ಆತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಧಾರವಾಡ ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ್‌ ಅಬ್ದುಲ್ ಅಲೀಮ್‌ ಸಿದ್ಧಿಕಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ.ಎಚ್., ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಶಕುಂತಲಾ, ಅಳ್ನಾವರ ಉಪ ವಲಯ ಅರಣ್ಯಾಧಿಕಾರಿ ಯಲ್ಲನಾಯ್ಕ ಹಮಾಣಿ, ಅರಣ್ಯ ಪಾಲಕರಾದ ಮಾರುತಿ ಎಣ್ಣಿ, ಸಂಗಣ್ಣ ಬಿರಾದಾರ, ಗುರುರಾಜ ಎಚ್., ಪಾಲ್ಗೊಂಡಿದ್ದರು.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *