Breaking News

ಬಸ್-ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ

ಉಡುಪಿ: ಬಸ್ ಹಾಗೂ ಕ್ರೂಸರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಉಡುಪಿಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *