Breaking News

ಗೋವಾ ನೈಟ್‌ ಕ್ಲಬ್ ಅಗ್ನಿ ದುರಂತ: ಲೂಥ್ರಾ ಸಹೋದರರ ಕಚೇರಿ, ನಿವಾಸದ ಮೇಲೆ ED ದಾಳಿ

ಪಣಜಿ/ನವದೆಹಲಿ: ಕಳೆದ ತಿಂಗಳು ಅಗ್ನಿ ದುರಂತ ಸಂಭವಿಸಿದ ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ನ ಮಾಲೀಕರಾದ ಲೂಥ್ರಾ ಸಹೋದರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯವು (ಇ.ಡಿ), ಇಂದು ಅವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನೈಟ್‌ ಕ್ಲಬ್‌ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಹಾಗೂ ಸಹ-ಮಾಲೀಕ ಅಜಯ್ ಗುಪ್ತಾ ಅವರ ಕಚೇರಿಗಳು ಮತ್ತು ನಿವಾಸಗಳ ಮೇಲೆ ಇ.ಡಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ವಿಲ್ಲಾಗಳು, ಗೋವಾ ಸೇರಿದಂತೆ ಸುಮಾರು 8 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿಂದೆ ಅಕ್ರಮ ಜಾಗದಲ್ಲಿದ್ದ ಕಟ್ಟಡವನ್ನು ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ ಎಂದು ಪರಿರ್ವತನೆ ಮಾಡಿದ್ದು, ಈ ಹಿನ್ನೆಲೆ ಹಣ ಅಕ್ರಮ ವರ್ಗಾವಣೆ ‍ಪ್ರಕರಣದಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ‘ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್’ನಲ್ಲಿ ನಡೆದ ಬೆಂಕಿ ದುರಂತದಲ್ಲಿ 25 ಜನರು ಮೃತಪಟ್ಟಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *