Breaking News

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಮೃತ್ಯು

ಹನೂರು: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಗ್ಗೆರೆ ನಿವಾಸಿ ಗಣೇಶ್ ಮೃತ ದುರ್ದೈವಿ. ಮೃತ ಗಣೇಶ್ ಹಾಗೂ ಸ್ನೇಹಿತ ನಾಗರಾಜು ಶುಕ್ರವಾರ ಮುಂಜಾನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹನೂರಿನಿಂದ ಕೊಳ್ಳೇಗಾಲಕ್ಕೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಪಟ್ಟಣದ ಹೊರ ವಲಯದಲ್ಲಿನ ಅಗ್ನಿ ಶಾಮಕ ಠಾಣೆ ಸಮೀಪ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತಿದ್ದ ನಾಗರಾಜು ತೀವ್ರ ಗಾಯಗೊಂಡಿದ್ದರಿಂದ 108 ಆಂಬುಲೆನ್ಸ್‌ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *