ಕಲಬುರಗಿ : ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (FDA) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಈ ದಾಳಿ ನಡೆದಿದೆ. ಪ್ರಥಮ ದರ್ಜೆ ಸಹಾಯಕ ಸತೀಶ್ ರಾಠೋಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜೇವರ್ಗಿಯ ಶಿವಕುಮಾರ್ ಹೆಗಡೆ ಎಂಬುವವರ ಬಳಿ ಲಂಚ ಸ್ವೀಕಾರ ಮಾಡುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಫೋನ್ ಪೇ ಮೂಲಕ 10 ಸಾವಿರ ಲಂಚ ಸ್ವೀಕಾರ ಜಮೀನು ಪಹಣಿಯಲ್ಲಿ ನಮೂದಾಗಿದ್ದ ಹೆಸರು ತೆಗೆಯಲು ೧೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಸರ್ಕಾರಿ ಜಮೀನು ಎಂಬ ಹೆಸರು ತೆಗೆಯಲು ಲಂಚಕ್ಕೆ ಬೇಡಿಕೆಯಿಡಲಾಗಿತ್ತು. ಅಂತೆಯೇ ಫೋನ್ ಪೇ ಮೂಲಕ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕಲಬುರಗಿ ಲೋಕಾಯುಕ್ತ ಎಸ್ ಪಿ ಸಿದ್ದರಾಜ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸತೀಶ್ ರಾಠೋಡ್ ನನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

