Breaking News

ಚಲಿಸುತ್ತಿದ್ದ KSRTC ಬಸ್ ನತ್ತ ಹಾರಿದ ಯುವಕ | ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು

ತುಮಕೂರು : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನತ್ತ ಏಕಾಏಕಿ ಯುವಕನೊಬ್ಬ ಹಾರಿದ್ದು, ತಲೆ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದ ಆಗ್ರಹಾರದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಜ.23ರ ರಾತ್ರಿ 12:40ರ ಸುಮಾರಿಗೆ ನಡೆದ ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಪಟ್ಟ ವ್ಯಕ್ತಿ ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೆಗೌಡ ಎಂದು ತಿಳಿದುಬಂದಿದೆ. ಈ ಪ್ರಕರಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಕೌಟುಂಬಿಕ ಕಲಹಕ್ಕೆ ಬೇಸತ್ತು ಬಸ್‌ಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *