Breaking News

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಚವತ್ತಿ-ಉಮ್ಮಚ್ಚಗಿ ರಸ್ತೆಯ ಗೊರ್ಸಗದ್ದೆ ಬಳಿ ಮೈಸೂರಿನಿಂದ ದಾಂಡೇಲಿ ಕಡೆ ಬರುವ ಖಾಸಗಿ ಬಸ್ ಧರೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್‌ನಲ್ಲಿ 30 ಜನ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಚಾಲಕ ನಿರಂತರ ಬಸ್ ಚಾಲನೆಯಿಂದ ನಿದ್ದೆಗೆ ಜಾರಿದ್ದ, ಇದರಿಂದ ನಿಯಂತ್ರಣ ತಪ್ಪಿ ಬಸ್ ಧರೆಗೆ ಬಿದ್ದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಹಲವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *