Breaking News

ಬಸ್ ನಲ್ಲಿ ಕೈಕಟ್ಟಿ ಯುವತಿ ಮೇಲೆ ಅಮಾನುಷ ಹಲ್ಲೆ: ವಿಡಿಯೋ ವೈರಲ್

ಚಿಕ್ಕಮಗಳೂರು: ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಯೊಬ್ಬಳ ಕೈಕಟ್ಟಿ ಹಲ್ಲೆ ನಡೆಸಿದ ಘಟನೆ ಶುಕ್ರವಾರ(ಜ23) ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಬಸ್ಸಿನೊಳಗೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಹಲ್ಲೆ ನಡೆಸಿದ ಯುವಕರು ಹಾಗೂ ಹಲ್ಲೆಗೆ ಒಳಗಾದ ಯುವತಿ ಯಾರೆಂಬುದು ಇದುವರೆಗೆ ಪತ್ತೆಯಾಗಿಲ್ಲ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಡಿಯೋ ಆಧರಿಸಿ ಆರೋಪಿಗಳು ಮತ್ತು ಯುವತಿಯ ಗುರುತು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.ಈ ಅಮಾನುಷ ಕೃತ್ಯವು ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *