ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು ಪ್ರತಿಭಾ ಪೋಷೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರತಿಭಾ ಪೋಷಕರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

