Breaking News

ಹೆಡ್‌ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಚಾಮರಾಜನಗರ: ಸಂಚಾರ ಠಾಣೆಯಲ್ಲಿದ್ದ ಬೈಕ್‌ ಬಿಡಿಸಿಕೊಳ್ಳಲು ವಾಹನ ಸವಾರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್‌ ಕಾನ್‌ಸ್ಟೆಬಲ್‌ ಮಲ್ಲು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಚಾರ ಠಾಣೆಯಲ್ಲಿ ಇರಿಸಿಕೊಳ್ಳಲಾಗಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಮಾಲೀಕರಿಗೆ ₹ 3,000ಕ್ಕೆ ಬೇಡಿಕೆ ಇರಿಸಲಾಗಿತ್ತು.ಈ ಸಂಬಂಧ ದೂರುದಾರ ಹರದನಹಳ್ಳಿಯ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಂಜೆ ದೂರುದಾರ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ಹೆಡ್‌ ಕಾನ್‌ಸ್ಟೆಬಲ್‌ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *