ಬೆಂಗಳೂರು: ರಸ್ತೆ ಬದಿ ತಡರಾತ್ರಿ ನಿಂತಿದ್ದ ಯುವತಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್, ಡೇವಿಡ್, ತೇಜಸ್ವಿ ಹಾಗೂ ಮೋಹಿತ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ಮಡಿವಾಳ ಠಾಣೆ ವ್ಯಾಪ್ತಿಯ ಮಾರುತಿನಗರ ರಸ್ತೆಯೊಂದರ ಬದಿ ನಿಂತಿದ್ದ ಯುವತಿ ಮತ್ತು ಆಕೆಯ ಸ್ನೇಹಿತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಈ ಸಂಬಂಧ ಆಕೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧಿಸಲಾಗಿದೆ. ಆರೋಪಿಗಳ ಪೈಕಿ ಕೆಲವರು ಮಡಿಕೇರಿ, ಚಿಕ್ಕಮಗಳೂರು ಹಾಗೂ ಬೆಂಗಳೂರಿನವರಾಗಿದ್ದು, ಕೆಲವರು ಖಾಸಗಿ ಆಸ್ಪತ್ರೆ ಹಾಗೂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದರು. ಇತ್ತೀಚೆಗೆ ಮಾರುತಿನಗರ ರಸ್ತೆಯಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತ ನಿಂತಿದ್ದರು. ಆಗ ಸಮೀಪದಲ್ಲೇ ಪಾರ್ಟಿ ಮುಗಿಸಿಕೊಂಡು ಬಂದ ಆರೋಪಿಗಳು, ಯುವತಿ ಜತೆ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಾರೆ. ಆದರೆ, ಆಗ ಯುವತಿ ಮತ್ತು ಆಕೆಯ ಸ್ನೇಹಿತ ಪ್ರಶ್ನಿಸಿದಾಗ ಆರೋಪಿಗಳು ಇಬ್ಬರು ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

