Breaking News

“ಅಭಿವೃದ್ಧಿ ಬಿಟ್ಟು ಲಂಚ–ಅಬಕಾರಿ ಸರ್ಕಾರ ನಡೆಸ್ತಿದೆ ಕಾಂಗ್ರೆಸ್” – ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ, ರಾಜ್ಯ ಸರ್ಕಾರ ಲಂಚದ ಹಣದ ಮೇಲೆ ಬದುಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎರಡುವರೆ ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಭವಿ ಮುಖ್ಯಮಂತ್ರಿ ಎನ್ನಿಸಿಕೊಂಡಿರುವ ಸಿದ್ದರಾಮಯ್ಯ ಅವರು ದೇವರಾಜ ಅರಸ ದಾಖಲೆ ಮುರಿದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ, ಆದರೆ ಅಭಿವೃದ್ಧಿಗೆ ಒಂದು ಬಿಡಿಗಾಸು ಕೂಡ ನೀಡಿಲ್ಲ. ಹೊಸ ಯೋಜನೆಗಳಿಲ್ಲ, ರೈತರ ಸಂಕಷ್ಟಕ್ಕೆ ಸ್ಪಂದನೆ ಇಲ್ಲ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದರೂ ಸಚಿವರು ಭೇಟಿ ನೀಡಿಲ್ಲ ಎಂದು ಟೀಕಿಸಿದರು. ಗ್ಯಾರೆಂಟಿಗಳ ನೆಪದಲ್ಲಿ ಹಣ ಸಂಗ್ರಹಿಸಲು ಸರ್ಕಾರ ಅಬಕಾರಿ ಟಾರ್ಗೆಟ್ ಹೆಚ್ಚಿಸಿದೆ. ರಾಜ್ಯವನ್ನು ಕುಡುಕರ ರಾಜ್ಯ ಮಾಡೋಕೆ ಕಾಂಗ್ರೆಸ್ ಸರ್ಕಾರ ಹೊರಟಿದೆ. 500 ಮೀಟರ್‌ಗೆ ಲಿಕ್ಕರ್ ಶಾಪ್ ಸಿಗುತ್ತೆ, ಆದರೆ ಮೆಡಿಕಲ್ ಶಾಪ್ ಸಿಗೋದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು. ಮನೆ ಯೋಜನೆ ವಿಚಾರದಲ್ಲೂ ಸಿಎಂ ಸುಳ್ಳು ಹೇಳುತ್ತಿದ್ದಾರೆ. ಮನೆ ಕೊಟ್ಟದ್ದು ಬಿಜೆಪಿ ಸರ್ಕಾರ ಇದ್ದಾಗ, ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ವಿ.ಸೋಮಣ್ಣ ಗುದ್ದಲಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರ ಪ್ರತಿ ಮನೆಗೆ 1.5 ಲಕ್ಷ ರೂಪಾಯಿ ನೀಡಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಪ್ರೋಟೋಕಾಲ್ ಉಲ್ಲಂಘಿಸಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಆಹ್ವಾನ ನೀಡಿಲ್ಲ, ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ, ವಿರೋಧ ಪಕ್ಷದ ಧ್ವನಿ ಕುಗ್ಗಿಸಲು ದ್ವೇಷ ಭಾಷಣ ಅಸ್ತ್ರ ಬಳಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ತೀವ್ರ ವಾಗ್ದಾಳಿ ನಡೆಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *